1 Thessalonians 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆ0ದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.
Kannada BSI Bible 2016
ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Kannada Bible (KNCL) BSI 2016
ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.