1 Thessalonians 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಾ0ತಿಯಿ0ದ ಜೀವಿಸಲು ನಿಮ್ಮಿ0ದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವ0ತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆ0ದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.
Kannada BSI Bible 2016
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.
Kannada Bible (KNCL) BSI 2016
ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.