1 Thessalonians 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆ0ಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರ0ತೆ ನೀವು ದುಃಖದಿ0ದಿರುವುದು ನಮಗೆ ಇಷ್ಟವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
Kannada BSI Bible 2016
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.
Kannada Bible (KNCL) BSI 2016
ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.