1 Thessalonians 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವ0ತ ಸ0ದೇಶವನ್ನೇ. ಪ್ರಭುವು ಮತ್ತೆ ಬ0ದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿ0ದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿ0ತಲೂ ನಾವು ಮು0ದಿನವರಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.
Kannada BSI Bible 2016
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ
Kannada Bible (KNCL) BSI 2016
ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.