1 Thessalonians 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನ0ತರ, ಇನ್ನೂ ಜೀವದಿ0ದುಳಿದಿರುವ ನಾವು ಸತ್ತವರೊಡನೆ ಒ0ದುಗೂಡುವೆವು. ಪ್ರಭುವನ್ನು ಅ0ತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊ0ದಿಗೆ ಇರುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
Kannada BSI Bible 2016
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
Kannada Bible (KNCL) BSI 2016
ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.