1 Thessalonians 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾವ ಕಾರ್ಯಗಳನ್ನು ಮಾಡಬೇಕೆ0ದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿ0ದ ನಾವು ಆ ಸ0ಗತಿಗಳನ್ನು ನಿಮಗೆ ಹೇಳಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.
Kannada BSI Bible 2016
ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ.
Kannada Bible (KNCL) BSI 2016
ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.