1 Thessalonians 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದ0ತೆ ಮತ್ತು ಎಚ್ಚರಿಕೆ ನೀಡಿದ0ತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದ0ಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.
Kannada BSI Bible 2016
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.
Kannada Bible (KNCL) BSI 2016
ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.