1 Thessalonians 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದುದರಿ0ದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.
Kannada BSI Bible 2016
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.
Kannada Bible (KNCL) BSI 2016
ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.