1 Thessalonians 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆ0ಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆ0ಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
Kannada BSI Bible 2016
ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರಸ್ನೇಹ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದು ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ.
Kannada Bible (KNCL) BSI 2016
ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.