1 Thessalonians 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆ0ದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊ0ಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿ0ದಿರಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Kannada BSI Bible 2016
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Kannada Bible (KNCL) BSI 2016
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.