1 Thessalonians 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾ0ತಿದಾಯಕನಾದ ದೇವರು ತಾನೇ ನಿಮ್ಮನ್ನು ಸ0ಪೂರ್ಣವಾಗಿ ಪರಿಶುದ್ಧಗೊಳಿಸಲೆ0ದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆ0ದು ಪ್ರಾರ್ಥಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
Kannada BSI Bible 2016
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.
Kannada Bible (KNCL) BSI 2016
ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.