1 Thessalonians 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಮಗೆ ಶಾ0ತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎ0ದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉ0ಟಾಗುವ0ತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Kannada BSI Bible 2016
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Kannada Bible (KNCL) BSI 2016
ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.