1 Thessalonians 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಹಗಲಿಗೆ ಸೇರಿದವರಾದ್ದರಿ0ದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನ0ಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
Kannada BSI Bible 2016
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
Kannada Bible (KNCL) BSI 2016
ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.