1 Timothy 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
Kannada BSI Bible 2016
ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;
Kannada Bible (KNCL) BSI 2016
ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.