1 Timothy 1:13 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.
Kannada BSI Bible 2016
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
Kannada Bible (KNCL) BSI 2016
ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.