1 Timothy 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
Kannada BSI Bible 2016
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.
Kannada Bible (KNCL) BSI 2016
ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.