1 Timothy 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
Kannada BSI Bible 2016
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;
Kannada Bible (KNCL) BSI 2016
ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.