1 Timothy 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
Kannada BSI Bible 2016
ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
Kannada Bible (KNCL) BSI 2016
ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.