1 Timothy 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
Kannada BSI Bible 2016
ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
Kannada Bible (KNCL) BSI 2016
ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.