1 Timothy 2:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
Kannada BSI Bible 2016
ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
Kannada Bible (KNCL) BSI 2016
ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.