1 Timothy 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
Kannada BSI Bible 2016
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.
Kannada Bible (KNCL) BSI 2016
ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.