1 Timothy 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
Kannada BSI Bible 2016
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.
Kannada Bible (KNCL) BSI 2016
ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.