1 Timothy 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
Kannada BSI Bible 2016
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
Kannada Bible (KNCL) BSI 2016
ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.