1 Timothy 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
Kannada BSI Bible 2016
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
Kannada Bible (KNCL) BSI 2016
ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.