1 Timothy 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Kannada BSI Bible 2016
ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Kannada Bible (KNCL) BSI 2016
ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ: ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.