1 Timothy 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
Kannada BSI Bible 2016
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
Kannada Bible (KNCL) BSI 2016
ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.