1 Timothy 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
Kannada BSI Bible 2016
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.
Kannada Bible (KNCL) BSI 2016
ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.