1 Timothy 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
Kannada BSI Bible 2016
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
Kannada Bible (KNCL) BSI 2016
ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.