1 Timothy 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.
Kannada BSI Bible 2016
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ.
Kannada Bible (KNCL) BSI 2016
ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.