1 Timothy 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
Kannada BSI Bible 2016
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
Kannada Bible (KNCL) BSI 2016
ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.