1 Timothy 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
Kannada BSI Bible 2016
ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು.
Kannada Bible (KNCL) BSI 2016
ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.