1 Timothy 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Kannada BSI Bible 2016
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Kannada Bible (KNCL) BSI 2016
ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.