1 Timothy 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
Kannada BSI Bible 2016
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು
Kannada Bible (KNCL) BSI 2016
ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು