1 Timothy 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
Kannada BSI Bible 2016
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.
Kannada Bible (KNCL) BSI 2016
ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.