1 Timothy 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
Kannada BSI Bible 2016
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.
Kannada Bible (KNCL) BSI 2016
ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.