1 Timothy 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
Kannada BSI Bible 2016
ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ಮದಿಸಿ ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
Kannada Bible (KNCL) BSI 2016
ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು.