1 Timothy 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
Kannada BSI Bible 2016
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
Kannada Bible (KNCL) BSI 2016
ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.