1 Timothy 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
Kannada BSI Bible 2016
ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬುವವಳಾದ ಸ್ತ್ರೀಯ ಅಧೀನದಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
Kannada Bible (KNCL) BSI 2016
ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.