1 Timothy 5:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
Kannada BSI Bible 2016
ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
Kannada Bible (KNCL) BSI 2016
‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!” ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.