1 Timothy 5:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
Kannada BSI Bible 2016
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
Kannada Bible (KNCL) BSI 2016
ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.