1 Timothy 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
Kannada BSI Bible 2016
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
Kannada Bible (KNCL) BSI 2016
ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.