1 Timothy 5:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
Kannada BSI Bible 2016
ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
Kannada Bible (KNCL) BSI 2016
ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ.