1 Timothy 5:4 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.
Kannada BSI Bible 2016
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
Kannada Bible (KNCL) BSI 2016
ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.