1 Timothy 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
Kannada BSI Bible 2016
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
Kannada Bible (KNCL) BSI 2016
ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.