1 Timothy 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
Kannada BSI Bible 2016
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
Kannada Bible (KNCL) BSI 2016
ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?