1 Timothy 6:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
Kannada BSI Bible 2016
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.

Recommended Reading