1 Timothy 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
Kannada BSI Bible 2016
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ
Kannada Bible (KNCL) BSI 2016
ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.