1 Timothy 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.
Kannada BSI Bible 2016
ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.
Kannada Bible (KNCL) BSI 2016
ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.