1 Timothy 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
Kannada BSI Bible 2016
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.
Kannada Bible (KNCL) BSI 2016
ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.