1 Timothy 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.
Kannada BSI Bible 2016
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
Kannada Bible (KNCL) BSI 2016
ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.